ಭಾರತದಲ್ಲಿ ಊಟ ಸಂಪಾದಿಸಿಕೊಳ್ಳುವುದೇ ದೊಡ್ಡ ಸವಾಲು. ಆ ಸವಾಲು ಸ್ವೀಕರಿಸಿದ ಮನುಷ್ಯರು ಕೋಟ್ಯಾಂತರ ಇರುವುದರಿಂದ ಮತ್ತು ಅವರಲ್ಲಿ ಬಹಳಷ್ಟು ಜನ "ನಗಣ್ಯ"ರೂ ಆಗಿರುವುದರಿಂದ ಅವರ ಸಾವು, ನೋವು, ಅಪಘಾತ, ಸುರಕ್ಷೆ, ಸುದ್ದಿಯೂ ಅಲ್ಲ, ಗಮನಹರಿಸಬೇಕಾದ ಸಮಸ್ಯೆಯೂ ಅಲ್ಲ. ಹೌದೆ? ನಿಜವೆ?
ಒಂದು ಆಟೋದಲ್ಲಿ 12-13 ಜನ ಕುಳಿತು ಯಾವೊಂದು ಸುರಕ್ಷೆಯೂ ಇಲ್ಲದ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಾರೆ; ದಿನಗೂಲಿಗೆ.
10-12 ಜನ ಮಾತ್ರ ಕೂಡಬಹುದಾದ ಜೀಪಿನಲ್ಲಿ ಮೇಲೆ-ಕೆಳಗೆ ಎಲ್ಲಾ ಸೇರಿ 20-25 ಜನ ಕಣಿವೆ-ಗುಡ್ಡ-ಬೆಟ್ಟಗಳಲ್ಲಿ ಮಳೆ-ಬಿಸಿಲು-ಗಾಳಿ-ಧೂಳನ್ನು ಅನುಭವಿಸುತ್ತ ಸಾಗುತ್ತಾರೆ. ಆಗಾಗ ಕಾಲನರಮನೆಗೂ.
Link to this comment:
All Comments (0)